ಬಹರೈನ್ ನಲ್ಲಿ ಇಸ್ರೇಲ್ ಪರ ಸಾಮಾಜಿಕ ತಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕನ್ನಡಿಗ ವೈದ್ಯನನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅವರು ಕಾರ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯಿಂದಲೂ ವಜಾ ಮಾಡಲಾಗಿದೆ. ತನ್ನ ಪೋಸ್ಟ್ ವಿವಾದವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ವೈದ್ಯ ತಕ್ಷಣವೇ ಅದನ್ನು ಡಿಲೀಟ್ ಮಾಡಿ ಕ್ಷಮೆ ಕೋರಿದ್ದರು. ಆದರೂ ಆಸ್ಪತ್ರೆ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ.

