- ಅತಿಥಿ ಉಪನ್ಯಾಸಕರನ್ನ ಖಾಯಂ ಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ. ಧಾರವಾಡ: ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಇತರ್ಥಪಡಿಸಿ ಖಾಯಂ ಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ರಾಜ್ಯ ಘಟಕ ಬೆಂಗಳೂರು ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅಂತ್ಯವಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕರ್ತವ್ಯವನ್ನು ಹತ್ತಾರು ವರ್ಷಗಳಿಂದ ಸೇವೆಸಲುಸುತ್ತಿದ್ದು ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಕೂಡಲೇ ಖಾಯಂಮಾತಿ ಮಾಡಿಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. . ಡಾ. ಹನುಮಂತ ಗೌಡ ಆರ್ ಕಲ್ಮನಿ , ಡಾ ವಿನೋದ್ ಚಂದ್ರ ಪೀಟರ್, ಪ್ರೊಫೆಸರ್ ವಿಜಯಲಕ್ಷ್ಮಿ ಜೋಶಿ ಡಾ. ವೀರಣ್ಣ ಹಳ್ಳಿಗೇರಿ, ಕೃಷ್ಣ ಬೆಂತೂರ್ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

ಅತಿಥಿ ಉಪನ್ಯಾಸಕರನ್ನ ಖಾಯಂ ಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ.
